ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪತ್ನಿ ಮತ್ತು ತಾಯಿಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ  ಮುಂದೂರಿದ ಕೋರ್ಟ್…

ನವದೆಹಲಿ,ಡಿ,4,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನೀಡಿರುವ ಸಮನ್ಸ್ ರದ್ದು ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ  ದೆಹಲಿ ಹೈಕೋರ್ಟ್ ಡಿಸೆಂಬರ್ 11ಕ್ಕೆ ಮುಂದೂಡಿದೆ.

ಈ ಮೂಲಕ ಮತ್ತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಯನ್ನು ಬೆಂಗಳೂರಿನಲ್ಲಿಯೇ ನಡೆಸುವಂತೆ ಮಾಜಿ ಸಚಿವ ಡಿಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ ಅರ್ಜಿ ಸಲ್ಲಿಸಿದ್ದರು.

ಪ್ರಕರಣ ಸಂಬಂಧ ಮಾಜಿ ಸಚಿವ ಡಿ.ಕೆ ಶಿವಕುಮಾರ್  ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಇದೇ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ತಾಯಿ ಗೌರಮ್ಮ, ಪತ್ನಿ ಉಷಾಗೆ ಸಮನ್ಸ್ ಜಾರಿಮಾಡಿ, ವಿಚಾರಣೆಗೆ ದೆಹಲಿಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನು ಪ್ರಕರಣ ಸಂಬಂಧ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಗೂ ಸಮನ್ಸ್ ನೀಡಿ ವಿಚಾರಣೆ ನಡೆಸಿತ್ತು.

Key words: former minister- DK Sivakumar- wife – mother -Court -adjourned – application hearing