ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ…

ದಾವಣಗೆರೆ,ಅಕ್ಟೋಬರ್,27,2020(www.justkannada.in):  ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ಮುಖಂಡ ವೈ. ನಾಗಪ್ಪ  ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು ಒಬ್ಬ ಪುತ್ರ, ಮೂವರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.Former Minister -Dr. Y.Nagappa -passed away.

ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ 1989, 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಬಾರಿ ಶಾಸಕರಾಗಿದ್ಧ ನಾಗಪ್ಪ, ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

Key words: Former Minister -Dr. Y.Nagappa -passed away.