ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಡಾ. ನಾರಾಯಣಗೌಡ

 

ಬೆಂಗಳೂರು,ಮಾರ್ಚ್,19,2021: ಇಂದು ನಿಧನರಾದ ಮಾಜಿ ಸಚಿವ ಹೆಚ್ ಟಿ ಕೃಷ್ಣಪ್ಪ ಅವರ ಪಾರ್ಥಿವ ಶರೀರಕ್ಕೆ ಸಚಿವ ಡಾ. ನಾರಾಯಣಗೌಡ ಅಂತಿಮ ನಮನ ಸಲ್ಲಿಸಿದರು. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿರುವ ಅವರ ನಿವಾಸಕ್ಕೆ ತೆರಳಿ ಅಂತಿಮನಮನ ಸಲ್ಲಿಸಿದರು.

ಹೆಚ್ ಟಿ ಕೃಷ್ಣಪ್ಪ ಅವರು, ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ವಿರೋಧ ಪಕ್ಷದ ನಾಯಕರೂ ಆಗಿದ್ದ ಕೃಷ್ಣಪ್ಪನವರು ರಂಗಕಲಾವಿಧರು ಆಗಿದ್ದರು. ಅವರ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

Key words:  Former Minister -HT Krishnappa- final vision –minister-Narayana Gowda