Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಐದು ಕ್ಷೇತ್ರಗಳಿಗೆ ತಮ್ಮ KRPP ಪಕ್ಷದ ಅಭ್ಯರ್ಥಿಗಳನ್ನ ಘೋಷಿಸಿದ ಮಾಜಿ ಸಚಿವ ಜನಾರ್ಧನ ರೆಡ್ಡಿ.

ಐದು ಕ್ಷೇತ್ರಗಳಿಗೆ ತಮ್ಮ KRPP ಪಕ್ಷದ ಅಭ್ಯರ್ಥಿಗಳನ್ನ ಘೋಷಿಸಿದ ಮಾಜಿ ಸಚಿವ ಜನಾರ್ಧನ ರೆಡ್ಡಿ.

ಕೊಪ್ಪಳ,ಫೆಬ್ರವರಿ,16,2023(www.justkannada.in): ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ರಾಜ್ಯ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಮ್ಮ ಪಕ್ಷದ

ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಇಂದು ಐದು ಕ್ಷೇತ್ರಗಳಿಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಗಳ ಹೆಸರನ್ನ ಮಾಜಿ ಸಚಿವ ಜನಾರ್ಧನರೆಡ್ಡಿ ಪ್ರಕಟಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ-ಧರೆಪ್ಪ ನಾಯಕ, ಕೊಪ್ಪಳ ಜಿಲ್ಲೆಯ ಕನಕಗಿರಿಗೆ-ಡಾ.ಚಾರುಲ್ ದಾಸರಿ, ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರಕ್ಕೆ-ಶ್ರೀಕಾಂತ್, ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರ-ನೆಕ್ಕಂಟಿ ಮಲ್ಲಿಕಾರ್ಜುನ, ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರ-ಮಹೇಶ್ ಅಭ್ಯರ್ಥಿಯನ್ನಾಗಿ ಪ್ರಕಟಿಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ಧನ ರೆಡ್ಡಿ, ಗೆಲ್ಲುತ್ತಾರೆ ಎನ್ನುವ ನಂಬಿಕೆಯಿಂದ ಅಭ್ಯರ್ಥಿ ಘೋಷಣೆ ಮಾಡಿದ್ದೇವೆ. ಸರ್ವೇ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳನ್ನ ಘೋಷಣೆ ಮಾಡುತ್ತಿದ್ದೆವೆ. ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

 

Key words: Former minister- Janardhana Reddy -announced – KRPP party- candidates