ಸಿದ್ದರಾಮಯ್ಯ ಇಲ್ಲದಿದ್ರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ- ಮಾಜಿ ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು,ಜನವರಿ,6,2026 (www.justkannada.in): ಸಿಎಂ ಸಿದ್ದರಾಮಯ್ಯ ಇದ್ದರೆ ಕಾಂಗ್ರೆಸ್.  ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಗೆ ಅವಕಾಶ ಕಡಿಮೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ಇಂದು ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ಬರೆಯುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಕೆ.ಎನ್ ರಾಜಣ್ಣ, ಸಿಎಂ ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆ ನನ್ನ ಅಚ್ಚುಮೆಚ್ಚಿನ ಕಾರ್ಯಕ್ರಮ. ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ  ಶ್ರೇಯಸ್ಸು ಲಭಿಸಲಿ ಎಂದು ಶುಭ ಹಾರೈಸಿದರು.

ವಾದ ಪ್ರತಿವಾದದ  ಬಗ್ಗೆ ಏನು ಮಾತನಾಡಲು ಹೋಗಲ್ಲ.  ಸಿದ್ದರಾಮಯ್ಯ ಸಿಎಂ ಆಗಿದ್ದು ಹೇಗೆ?  ಸಿಎಲ್ ಪಿ ಸಭೆಯಲ್ಲಿ ಶಾಸಕರ ಅಭಿಪ್ರಾಯ ಪಡೆದು ನಿರ್ಧಾರ ಮಾಡಲಾಗಿತ್ತು.  ಈಗಲೂ ಸಿಎಂ ಆಯ್ಕೆ ಮಾಡುವುದು ಸಿಎಲ್ ಪಿ ಸಭೆಯಲ್ಲಿ.  ರಾಷ್ಟ್ರೀಯ ಪಕ್ಷದಲ್ಲಿ ಮೇಲೊಬ್ಬರು ಎಲ್ಲವನ್ನೂ ನಿಯಂತ್ರಿಸುತ್ತಿರುತ್ತಾರೆ.  ಸಿಎಂ ಆಗಲು ಸಿಎಲ್ ಪಿ ಹೈಕಮಾಂಡ್ ಸಹಾನೂಭೂತಿ ಬೇಕು ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: Siddaramaiah, Congress, Former Minister, KN Rajanna