ಕುತೂಹಲ ಕೆರಳಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ‘ಕೈ’ ಶಾಸಕ ಮಹೇಶ್ ಕುಮುಟಳ್ಳಿ ಭೇಟಿ…

ಬೆಂಗಳೂರು,ಮೇ,15,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ತೊರೆಯಲು ಮುಂದಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ಶಾಸಕ ಮಹೇಶ್ ಕುಮುಟಳ್ಳಿ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ನಲ್ಲಿರುವ ಶಾಸಕ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಥಣಿ ಶಾಸಕ ಮಹೇಶ್ ಕುಮುಟಳ್ಳಿ ಭೇಟಿ ನೀಡಿದರು. ಸದ್ಯ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಬಿಸಿಯಾಗಿದ್ದ ಶಾಸಕ ಮಹೇಶ್ ಕುಮುಟಳ್ಳಿ ಹಲವು ದಿನಗಳ ನಂತರ ರಮೇಶ್ ಜಾರಕಿಹೊಳಿಯನ್ನ ಭೇಟಿ ಮಾಡಿದ್ದಾರೆ.

ಅತೃಪ್ತಗೊಂಡ ಶಾಸಕರ ಪೈಕಿ ರಮೇಶ್ ಜಾರಕಿಹೊಳಿ ಜತೆ ಮಹೇಶ್ ಕುಮುಟಳ್ಳಿ ಸಹ ಕಾಣಿಸಿಕೊಂಡಿದ್ದರು. ನಂತರ ರಮೇಶ್ ಜಾರಕಿಹೊಳಿ ಅವರಿಂದ ದೂರವಿದ್ದರು. ಇದೀಗ ದಿಢೀರ್ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ರಮೇಶ್ ಜಾರಕಿಹೊಳಿ ಭೇಟಿ ಬಳಿಕ ಮಾತನಾಡಿದ ಶಾಸಕ ಮಹೇಶ್ ಕುಮುಟಳ್ಳಿ, ನಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ. ಕೃಷ್ಣಾ ನದಿಯಲ್ಲಿ ನೀರಿಲ್ಲ. ಹೀಗಾಗಿ ಫೈಲ್ ತೆಗೆದುಕೊಂಡು ಬಂದಿದ್ದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಅವರನ್ನೇ ಕೇಳಿ. ಅವರೂ ಪಕ್ಷ ಬಿಟ್ಟು ಹೋಗಲ್ಲ. ನಾನೂ ಪಕ್ಷ ಬಿಟ್ಟು ಹೋಗಲ್ಲ. ನಮ್ಮೆಲ್ಲರ ನಿರ್ಧಾರ ಒಂದೇ ಆಗಿದೆ ಎಂದು ಸ್ಪಷ್ಟನೆ ನೀಡಿದರು.

Key words: Former minister -Ramesh Jarkiholi -Mahesh Kumuttali -meet