Sunday, September 13, 2026

BDA Apartments

ಮಾಜಿ ಸಚಿವ ರೋಷನ್ ಬೇಗ್ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ… BDA JK_Adv BDA Adv
Home Crime ಮಾಜಿ ಸಚಿವ ರೋಷನ್ ಬೇಗ್ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ…

ಮಾಜಿ ಸಚಿವ ರೋಷನ್ ಬೇಗ್ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ…

ಬೆಂಗಳೂರು, ನವೆಂಬರ್,25,2020(www.justkannada.in):  ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.I didn't knew CM BSY will think so cheaply - KPCC President D.K. Shivakumar

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿಂತೆ ಸಿಬಿಐನಿಂದ ಬಂಧಿತರಾಗಿರುವ ರೋಷನ್ ಬೇಗ್ ರನ್ನ ಇಂದು ಸಿಬಿಐ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಜಡ್ಜ್ ಮಂಜುಳ ಇಟ್ಟಿ ಅವರು ಮಾಜಿ ಸಚಿವ ರೋಷನ್ ಬೇಗ್ ಅವರನ್ನ ನವೆಂಬರ್ 28ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ಭಾನುವಾರ  ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಳಿಕ ಕೋರ್ಟ್ ಹಾಜರುಪಡಿಸಿತ್ತು. ನಂತರ ರೋಷನ್ ಬೇಗ್ ಅವರನ್ನ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ಮಧ್ಯೆ ಬೆಂಗಳೂರಿನ ಕೋಲ್ಸ್ ಪಾರ್ಕ್ ನಲ್ಲಿನ ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು.

Key words: Former minister- Roshan Baig- CBI custody – three days