ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…

ಬೆಂಗಳೂರು,ಡಿಸೆಂಬರ್,2,2020(www.justkannada.in):  ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.logo-justkannada-mysore

ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ನಿನ್ನೆಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನಿನ್ನೆ ಒಂದು ದಿನಗಳ ಕಾಲ ರೋಷನ್ ಬೇಗ್ ಅವರನ್ನ  ಸಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು. ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮತ್ತೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ರೋಷನ್ ಬೇಗ್ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.former-minister-roshan-baig-judicial-custody-14-days

ಇನ್ನು ರೋಷನ್ ಬೇಗ್ ಸಲ್ಲಿಸಿರುವ ಜಾಮೀನು ಅರ್ಚಿ ವಿಚಾರಣೆಯನ್ನ ಈಗಾಗಲೇ ಡಿಸೆಂಬರ್ 4ಕ್ಕೆ ಮುಂದೂಡಲಾಗಿದ್ದು ಅಂದು ರೋಷನ್ ಬೇಗ್ ಅವರ ಭವಿಷ್ಯ ನಿರ್ಧಾರವಾಗಲಿದೆ.

Key words: Former minister -Roshan Baig – judicial custody – 14 days