ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಚಿವ ವಿ.ಸೋಮಣ್ಣ.

ನವದೆಹಲಿ, ಫೆಬ್ರವರಿ,5,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾಜಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿಜೆಪಿ ನಾಯಕ ವಿ.ಸೋಮಣ್ಣ, ತುಮಕೂರು ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕೆಂದು ಅವರ ಭಾವನೆಯಾಗಿದೆ. ಸಾಧ್ಯವಾದರೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದರು.

ದೇಶದಲ್ಲಿ ಮತ್ತೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ಬರಬೇಕೆಂಬುದು ಎಲ್ಲರ ಇಚ್ಛೆಯಾಗಿದೆ. ಬಿಜೆಪಿ ಬೇರು ಗಟ್ಟಿ ಇದೆ. ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾರ್ಯಕರ್ತರು ಇದ್ದಾರೆ. ನಾನು ಕಳೆದ ಬಾರಿ ದೆಹಲಿಗೆ ಬಂದಾಗಲೇ ಅಭಿಪ್ರಾಯ ತಿಳಿಸಿದ್ದೇನೆ. ನನ್ನದೇ ತೀರ್ಮಾನ ಅಂತಾ ನಾನು ಹೇಳುವುದಿಲ್ಲ ಎಂದು ವಿ.ಸೋಮಣ್ಣ ತಿಳಿಸಿದರು.

Key words: Former minister -V. Somanna -clarified – competition – Lok Sabha -elections.