ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿ- ಆಸ್ಪತ್ರೆಗೆ ಭೇಟಿ ನೀಡಿ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್…

ಮೈಸೂರು,ನ,20,2019(www.justkannada.in): ಮಾಜಿ ಸಚಿವ  ಜಮೀರ್ ಅಹ್ಮದ್ ಖಾನ್ ಇಂದು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ತನ್ವಿರ್ ಅರೋಗ್ಯವನ್ನ ವಿಚಾರಿಸಿದರು.

ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ತನ್ವೀರ್ ಸೇಠ್ ಅರೋಗ್ಯ ವಾಗಿದ್ದಾರೆ. ತನ್ವೀರ್ ಸೇಠ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಇತಂಹ ಘಟನೆ ನೆಡೆಯಬಾರದಿತ್ತು. ಪೊಲೀಸರು ಅರೋಪಿಯನ್ನು ಬಂಧಿಸಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಎಸ್ ಡಿ ಪಿ ಐ ಸಂಘಟನೆ ಬ್ಯಾನ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಹಂತದಲ್ಲಿ ಏನು ಹೇಳಲು ಸಾಧ್ಯವಿಲ್ಲ ಎಂದರು.

Key words: Former minister -Zamir Ahmad Khan visit- hospital- health-Tanveer Seth