ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ಧ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಘಾತದಿಂದ ನಿಧನ

ಬೆಂಗಳೂರು,ನವೆಂಬರ್,25,2022(www.justkannada.in):   ಮುಂದಿನ  ವಿಧಾನಸಭೆ ಚುನಾವಣೆ  ಹಿನ್ನೆಲೆಯಲ್ಲಿ ಚರ್ಚಿಸಲು ಕರೆಯಲಾಗಿದ್ದ  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು  ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಕರೆದಿದ್ದರು.  ಸಭೆಗೆ ಬಂದಿದ್ದ ಶ್ರೀಶೈಲಪ್ಪ ಅವರು ಕುಸಿದುಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನದಿಂದಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೂಡಿದ್ದು, ನವೆಂಬರ್ 27ರಂದು ಜೂಮ್ ಮೂಲಕ ಸಭೆ ನಿಗದಿ ಮಾಡಿದ್ದಾರೆ.

Key words: Former MLA -Srishailappa Bederuru – died – heart attack