ಮಾಜಿ ಶಾಸಕ ವೈಎಸ್ ವಿ ದತ್ತ ಮತ್ತು ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು,ಜನವರಿ,14,2023(www.justkannada.in): ಮಾಜಿ ಶಾಸಕ ವೈಎಸ್ ವಿ ದತ್ತ ಮತ್ತು ಮುಳುಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್  ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಎಸ್ ವಿ ದತ್ತಾ ಹಾಗೂ ಶಾಸಕ ಹೆಚ್. ನಾಗೇಶ್ ರನ್ನು ಪಕ್ಷದ ಧ್ವಜ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು. ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಸಹ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ವೈಎಸ್ ವಿ ದತ್ತ ಘೋಷಣೆ ಮಾಡಿದ್ದರು. ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಸಹ ಕಾಂಗ್ರೆಸ್ ಸೇರ್ಪಡೆಗೆ ಕಸರತ್ತು ನಡೆಸಿದ್ದರು.

Key words: Former MLA- YS V Dutta – MLA- H Nagesh- joined- Congress.