Tuesday, October 6, 2026

BDA Apartments

immense respect BDA JK_Adv BDA Adv
Home Front Page  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ- ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ…

 ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ- ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ…

ಬೆಂಗಳೂರು,ಡಿ,16,2019(www.justkannada.in):  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೇನೆ ಎಂದು ಮಾಝಿ ಸಂಸದ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ,ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನೂ ಪರಿಗಣಿಸುವಂತೆ ಎಐಸಿಸಿ ಪದಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ನಾನೂ  ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಕಾಂಕ್ಷಿ. ಹೈಕಮಾಂಡ್ ನನಗೆ ಅವಕಾಶ ನೀಡಿದರೇ ಕೆಲಸ ಮಾಡುತ್ತೇನೆ. ಈ ಹಿಂದೇ ಸಾಕಷ್ಟು ಜವಾಬ್ದಾರಿ ನಿಭಾಯಿಸಿದ್ದೇನೆ. ನಾನು ರಾಹುಲ್ ಗಾಂಧಿ ಸೋನಿಯಾ ಗಾಂಧಿ ನಿರ್ಧಾರಕ್ಕೆ ಬದ್ಧ. ನಾನು ಸೋನಿಯಾ ಗಾಂಧಿ ಭೇಟಿ ಮಾಡುವಿದಿಲ್ಲ ಎಂದರು.

ಉಪಚುನಾವಣೆಯಲ್ಲಿ ಸೋಲು ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿದೆ.

key words: Former MP- KH Muniyappa – KPCC  president-post