ಸದಾಶಿವ ಆಯೋಗ ವರದಿ ಯಥಾವತ್ ಜಾರಿಗೆ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹ…

ಬೆಂಗಳೂರು,ಆಗಸ್ಟ್,31,2020(www.justkannada.in):  ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗ ವರದಿಯನ್ನು ಯಥಾವತ್ ಜಾರಿಗೊಳಿಸಿ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ಆಗ್ರಹಿಸಿದರು.jk-logo-justkannada-logo

ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ,  ‘ಒಳ ಮೀಸಲಾತಿಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಯಾರಿಗೂ ಅನ್ಯಾಯವಾಗುವುದಿಲ್ಲ.  ಸದಾಶಿವ ಅವರು ವೈಜ್ಙಾನಿಕವಾಗಿಯೇ ವರದಿ ನೀಡಿದ್ದಾರೆ. ವರದಿ ಜಾರಿಯಾದರೂ ನಾವೆಲ್ಲ ಒಟ್ಟಾಗಿಯೇ ಇರುತ್ತೇವೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ ಎಂದು ಸಲಹೆ ನೀಡಿದರು.former-mp-kh-muniyappa-sadashiva-commission-report-implement

ಹಾಗೆಯೇ ‘ಪ್ರಸ್ತುತ ಸರಿಯಾದ ಪ್ರಮಾಣದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಈ ವರದಿ ಜಾರಿಯಾದರೆ ಮೀಸಲಾತಿಗೆ ನ್ಯಾಯ ಸಿಗಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಮುಂದಾಗಿದ್ದರು. ಆದರೆ, ಚುನಾವಣೆ ಎದುರಾದ ಕಾರಣ ಅಲ್ಲಿಗೇ ಕೈಬಿಟ್ಟಿದ್ದರು ಎಂದು ಕೆ.ಹೆಚ್ ಮುನಿಯಪ್ಪ ತಿಳಿಸಿದರು.

Key words: Former MP -KH Muniyappa – Sadashiva Commission -report – implement