Thursday, October 8, 2026

BDA Apartments

Home Front Page ಮಾಜಿ ಸಂಸದ ಪ್ರತಾಪ್ ಸಿಂಹಗೆ ನಿರೀಕ್ಷಣಾ ಜಾಮೀನು ಮಂಜೂರು

ಮಾಜಿ ಸಂಸದ ಪ್ರತಾಪ್ ಸಿಂಹಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು,ಅಕ್ಟೋಬರ್,8,2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ  ನಿರೀಕ್ಷಣಾ ಜಾಮೀನು ಮಂಜೂರು  ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಟಿ. ನರಸೀಪುರದಲ್ಲಿ ನಡೆದಿದ್ದ ಪ್ರತಿಭಟನೆ, ಸಾರ್ವಜನಿಕ ಸಭೆಯ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ದ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.Anticipatory bail prathap simha

ಈ ಹಿನ್ನೆಲೆಯಲ್ಲಿ, ನಿರೀಕ್ಷಣಾ ಜಾಮೀನು ಕೋರಿ  ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರತಾಪ್ ಸಿಂಹ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.Anticipatory bail jk02_new jk02 new

 

English Summary
Title

Anticipatory bail granted to former MP Pratap Simha.

Short Description
The Special Court for People's Representatives in Bengaluru has granted anticipatory bail to former MP Pratap Simha in connection with a case registered at the T. Narasipura police station in Mysuru district. A case had been registered against the former MP at the T. Narasipura police station on charges of disrupting law and order during a protest and public meeting held in T. Narasipura.
Keywords
Anticipatory bail, granted, former MP, Pratap Simha