ಬೆಂಗಳೂರು:ಜೂ-2:(www.justkannada.in) ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ಮಾಜಿ ಸಂಸದೆ, ನಟಿ ರಮ್ಯಾ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ. ಈ ಹಿನ್ನಲೆಯಲ್ಲಿ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ಹುದ್ದೆಯನ್ನು ತೊರೆದಿದ್ದಾರೆಯೇ ಎಂಬ ಶಂಕೆ ಆರಂಭವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಅನುಭವಿಸದ ಬೆನ್ನಲ್ಲೇ ರಮ್ಯಾ ತಮ್ಮ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಅವರ ಖಾತೆಯಲ್ಲಿದ್ದ ಎಲ್ಲಾ ಸಂದೇಶಗಳನ್ನು ಅಳಿಸಿ ಹಾಕಿದ್ದಾರೆ. ಇದರಿಂದ ಯಾವುದೇ ಸಂದೇಶಗಳು ಸಹ ತೋರುತ್ತಿಲ್ಲ. ಯಾವ ಕಾರಣದಿಂದಾಗಿ ಸಂದೇಶಗಳನ್ನು ಅಳಿಸಿಹಾಕಿದ್ದಾರೆ ಎಂದೂ ಸಹ ತಿಳಿದುಬಂದಿಲ್ಲ.
ರಮ್ಯಾ ಅವರು ತಮ್ಮ ಟ್ವೀಟರ್ ಖಾತೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗ ಸಹ ಮಾಹಿತಿ ನೀಡಲು ನಿರಾಕರಿಸಿದ್ದು, ರಮ್ಯಾ ತಮ್ಮ ಹುದ್ದೆ ತೊರೆದಿರಬಹುದು ಎಂಬ ಅನುಮಾನ ಕೂಡ ಮೂಡಿದೆ.