ಬೆಂಗಳೂರು,ಜನವರಿ,2,2026 (www.justkannada.in): ನೈಸ್ ಸಂಸ್ಥೆಯ ಕೆಲವು ಕೆಐಎಡಿಬಿ ಜಾಗವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೆವು. ಇದಕ್ಕೆ ಅವರು ತಕರಾರು ಎತ್ತಿದ್ದಾರೆ. ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆ ಕುರಿತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ನೈಸ್ ಸಂಸ್ಥೆ ವಿಚಾರವಾಗಿ ಡಿಕೆ ಶಿವಕುಮಾರ್ ಕಠಿಣವಾಗಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಿದೆ ಅಂತಾ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೆ ಹೇಳಿದ್ದು ತುಂಬಾ ಸಂತಸವಾಗಿದೆ. ಸರ್ಕಾರ ಯಾವುದೇ ಕ್ರಮ ಕೈಗೊಂಡರೂ ಸಂತಸ ಎಂದರು.
ಬಳ್ಳಾರಿ ಗಲಾಟೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಹೆಚ್.ಡಿ ದೇವೇಗೌಡರು, ಈ ಬಗ್ಗೆ ನಾನು ಮಾತನಾಡಲ್ಲ ಹೆಚ್ ಡಿಕೆ 2 ಬಾರಿ ಸಿಎಂ ಆಗಿದ್ದಾಗ ಸಾಕಷ್ಟು ಕ್ರಮ ಕೈಗೊಂಡಿದ್ದರು. ಹೆಚ್,ಡಿಕೆ ವಿರೋಧ ಪಕ್ಷದ ನಾಯಕನಾಗಿಯೂ ಹೋರಾಡಿದ್ದರು ಎಂದರು.
Key words: DK Shivakumar, NICE , organization, Former PM, H.D. Deve Gowda







