Saturday, August 15, 2026

BDA Apartments

Home Front Page ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದೂರು: ಹಾಸನ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗ ನೋಟಿಸ್.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ದೂರು: ಹಾಸನ ಜಿಲ್ಲಾಧಿಕಾರಿಗೆ ಚುನಾವಣಾ ಆಯೋಗ ನೋಟಿಸ್.

ಹಾಸನ,ಮಾರ್ಚ್,23,2024(www.justkannada.in): ಆಡಳಿತ ಪಕ್ಷದ ಏಜೆಂಟ್ ರಂತೆ   ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ದೂರು ನೀಡಿದ್ದಾರೆ.

ಹೆಚ್.ಡಿ ದೇವೇಗೌಡರ ದೂರು ಆಧರಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ.

ಹಾಸನ ಡಿಸಿ ಸತ್ಯಭಾಮ ಅವರು ಜಿಲ್ಲಾ ಉಸ್ತುವಾರಿ ಸಚಿವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ  ಆಡಳಿತ  ಪಕ್ಷದ ಏಜೆಂಟ್ ರೀತಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿಎಂ ಕಾರ್ಯಕ್ರಮಕ್ಕೆ ಇಲಾಖೆಗಳಿಂದ ಹಣ ಸಂಗ್ರಹಣೆ ಮಾಡಿ ಜನರಿಗೆ ಹಂಚಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬರಗಾಲವಿದ್ದರೂ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಮುಕ್ತ ನ್ಯಾಯ ಸಮ್ಮತ ಚುನಾವನೆ ನಡೆಸಲು ಡಿಸಿ ಸತ್ಯಭಾಮ ಅವರನ್ನ ವರ್ಗಾವಣೆ ಮಾಡುವಂತೆ ಹೆಚ್.ಡಿ ದೇವೇಗೌಡರು ದೂರು ನೀಡಿದ್ದರು.

ಇನ್ನು ಹೆಚ್.ಡಿ ದೇವೇಗೌಡರ ಆರೋಪಕ್ಕೆ ಸ್ಪಷ್ಟನೆ ನೀಡುವಂತೆ ಹಾಸನ ಡಿಸಿ ಸತ್ಯಭಾಮ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ ಎನ್ನಲಾಗಿದೆ.

Key words: Former PM-HD Deve Gowda- Complaint- Election Commission- Notice – Hassan -DC