Tuesday, September 29, 2026

BDA Apartments

ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾ...
Home Front Page ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ...

ಬಿಡದಿ ಟೌನ್ ಶಿಪ್ ನಿರ್ಮಾಣ: ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ- ಮಾಜಿ ಪ್ರಧಾನಿ ಹೆಚ್.ಡಿಡಿ ಗುಡುಗು

ಬೆಂಗಳೂರು,ಮೇ,16,2026 (www.justkannada.in): ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ವಿರೋಧ ವ್ಯಕ್ತಪಡಿಸಿದ್ದು, ರೈತರ ಜಮೀನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿಡದಿ ಬಳಿ ಹೋಗೋಣ ನಾನು ಬರುತ್ತೇನೆ. ಸಿಎಂ ಸಿದ್ದರಾಮಯ್ಯ ನೀವು ಬನ್ನಿ.ಇದುವರೆವಿಗೂ ಸ್ಥಳೀಯ ಶಾಸಕರು, ತಹಶೀಲ್ದಾರ್ ಜನರ ಸಮಸ್ಯೆಯನ್ನು ಕೇಳಿಲ್ಲ. ಸಿಎಂ ಸಿದ್ದರಾಮಯ್ಯ ನನ್ನ ಹಳೆಯ ಸ್ನೇಹಿತರು.  ಇದೊಂದು ದಂಧೆ.  ರೈತರ ಜಮೀನನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದಾರೆ. ಕನಕಪುರದಲ್ಲಿ ಎಷ್ಟು ಜಮೀನು ವಶಪಡಿಸಿಕೊಂಡಿದ್ದಾರೆಂಬ ಮಾಹಿತಿ ಇದೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸ್ಥಳಕ್ಕೆ ಹೋಗುತ್ತೇನೆ.  ರೈತರು ಹೊಡೆದರೂ ಹೊಡೆಸಿಕೊಳ್ಳುತ್ತೇನೆಂಬ ಡಿಕೆ ಶಿವ ಕುಮಾರ್ ಹೇಳಿಕೆಗೆ ಕೌಂಟರ್ ಕೊಟ್ಟ ಹೆಚ್ ಡಿ ದೇವೇಗೌಡರು, ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ  ಅ ಮೇಲೆ ಮಾತನಾಡುತ್ತೇನೆ ಎಂದರು.ಬಿಡದಿ ಟೌನ್ ಶಿಪ್ ನಿರ್ಮಾಣ jk02_new jk02 new

Key words:  Bidadi Township, farmers’ land, Former PM HD Devegowda