ಮಾಜಿ ಪ್ರಧಾನಿ ಹೆಚ್.ಡಿಡಿ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ..

ಬೆಂಗಳೂರು,ಜುಲೈ,17,2026 (www.justkannada.in):  ಮಾಜಿ ಪ್ರಧಾನಿ ಹೆಚ್.​ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ  ಚೆನ್ನಮ್ಮ ಅವರು ಬಳಲುತ್ತಿದ್ದಾರೆ ಎನ್ನಲಾಗಿದ್ದು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ಆಗಮಿಸಿದ್ದು, ಹೆಚ್ ಡಿ ದೇವೇಗೌಡರು ಸಹ ಪದ್ಮನಾಭ ನಗರ ನಿವಾಸದಿಂದ ಆಸ್ಪತ್ರೆಗೆ ತೆರಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಿಯ ಆರೋಗ್ಯದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ವೈದ್ಯರ ಬಳಿ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

Key words: Former PM, HD Devegowda, wife, critical