ಇಡೀ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರು ಆಗ್ರಹ…

ಬೆಂಗಳೂರು,ಜು,13,2020(www.justkannada.in): ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ  ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೆಂದು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.jk-logo-justkannada-logo

ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ವೈರಸ್ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ರಾಜ್ಯದ ಜನತೆಯ ಜೊತೆಗೆ  ನಮ್ಮ ಇಡಿ ದೇಶದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೀನಿ. ನಮಗೆ ಆರೋಗ್ಯವೇ ಭಾಗ್ಯ ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಸಲಹೆ ನೀಡಿದ್ದಾರೆ.former-prime-minister-h-d-devegowda-lockdown-state

ಇನ್ನೊಂದು ಪ್ರಮುಖವಾದ ವಿಷಯ ಈ ಮಹಾಮಾರಿ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ. ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ. ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು ನಾವೆಲ್ಲ ಜೊತೆಗಿದ್ದೀವಿ. ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ದಯವಿಟ್ಟು ಇನ್ನು ಮುಂದಾದರೂ ಎಚ್ಚೆತ್ತು ಕೆಲಸ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Key words: Former Prime Minister –H.D Devegowda-   lockdown – state