ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲು.

ಬೆಂಗಳೂರು,ಫೆಬ್ರವರಿ,28,2023(www.justkannada.in):  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಬೆಳಗ್ಗೆ 10.30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ದೇವೇಗೌಡರು ಆಸ್ಪತ್ರೆಗೆ ತೆರಳುವ ಬಗ್ಗೆ ಇಂದು ಬೆಳಿಗ್ಗೆ ಮಾಜಿ ಸಿಎಂ ಎಚ್.​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದರು. ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಇದೀಗ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

Key words: Former Prime Minister -HD Deve Gowda -admitted – hospital.