Tuesday, September 22, 2026

BDA Apartments

ಶಾಸಕ ಬಿ.ಸತ್ಯನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಸಂತ...
Home Front Page ಶಾಸಕ ಬಿ.ಸತ್ಯನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಸಂತಾಪ…

ಶಾಸಕ ಬಿ.ಸತ್ಯನಾರಾಯಣ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಸಂತಾಪ…

ಬೆಂಗಳೂರು,ಆ,4,2020(www.justkannada.in):  ಶಿರಾ ಕ್ಷೇತ್ರದ  ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.jk-logo-justkannada-logo

ಮಾಜಿ ಸಚಿವರು ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು ಅವರಿಲ್ಲದ ದಿನಗಳನ್ನು ನೆನೆಯಲು ನನ್ನಿಂದ ಸಾಧ್ಯವೇ ಇಲ್ಲ. ಸತ್ಯನಾರಾಯಣ್ ಅವರು ತುಂಬಾ ಮೃದು ಸ್ವಭಾವದವರು ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ.former-prime-minister-hd-deve-gowda-condoles-death-mla-b-sathyanarayan

ಹಾಗೆಯೇ ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೀನಿ  ಎಂದು ಹೆಚ್.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ಆನಾರೋಗ್ಯದಿಂದಾಗಿ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಜೆಡಿಎಸ್ ಶಾಸಕ  ಬಿ.ಸತ್ಯನಾರಾಯಣ್ ಅವರು ನಿಧನರಾದರು.

Key words: Former Prime Minister -HD Deve Gowda- condoles -death –MLA- B. Sathyanarayan