ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು: ಕಾರಣವೇನು ಗೊತ್ತೆ..?

ಬೆಂಗಳೂರು, ಮೇ, 25,2021(www.justkannada.in):  ಕೊರೋನಾ 2ನೇ ಅಲೆ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದು ಹೀಗಾಗಿ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.jk

ಈ ಸಂಬಂಧ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಹೆಚ್.ಡಿ ದೇವೇಗೌಡರು, ಕೊರೋನಾ ಲಾಕ್ ಡೌನ್ ಹಿನ್ನೆಲೆ ಹೂವು,ಹಣ್ಣು ತರಕಾರಿ ಖರೀದಿಸುವವರಿಲ್ಲದೇ ಹಾಳಾಗುತ್ತಿವೆ. ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ.ಸಣ್ಣ ಮತ್ತು ಮಧ್ಯಮ ಪ್ರಮಾಣದ ತೋಟಗಾರಿಕಾ ಬೆಳೆಗಾರರಿಗೆ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.former-prime-minister-hd-deve-gowda-letter-prime-minister-narendra-modi-farmer

ಟಮೊಟೊ, ಹೂವು, ತರಕಾರಿ ಹಾಗೂ ಹಣ್ಣು ಸೇರಿದಂತೆ ವಿವಿಧ ತೋಟಗಾರಿಕೆ ಉತ್ಪನಗಳ ಬೆಲೆ ಕುಸಿತವಾಗಿದೆ. ಯೋಗ್ಯ ಬೆಲೆ ಸಿಗದೆ ಕಂಗೆಟ್ಟ ರೈತರು ಹಣ್ಣು ತರಕಾರಿ ಸುರಿದು ನಾಶಪಡಿಸಿರುವ ವರದಿಗಳು ಪ್ರಕಟವಾಗಿವೆ. ಹೀಗಾಗಿ ತೋಟಗಾರಿಕೆ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡಿ ರೈತರ ನೆರವಿಗೆ ಬನ್ನಿ ಎಂದು ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.

Key words: Former Prime Minister -HD Deve Gowda –letter-Prime Minister -Narendra Modi-farmer