ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನಂದ್ರು ಗೊತ್ತೆ…?

0
277

ಕೋಲಾರ,ನ,13,2019(www.justkannada.in):  ಇಂದು ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸುಪ್ರೀಂಕೋರ್ಟ್ ನನ್ನ ನಿಲುವನ್ನ ಎತ್ತಿ ಹಿಡಿದಿದೆ ಎಂದು ತಿಳಿಸಿದ್ದಾರೆ.

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಅಡ್ಡಗಲ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಅನರ್ಹರಿಗೆ ಅನರ್ಹತೆ ಒಂದು ಶಿಕ್ಷೆಯಾದರೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.  ಇದು ಜನತಾ ನ್ಯಾಯಾಲಯದಲ್ಲಿ  ತೀರ್ಮಾನವಾಗಬೇಕಿದೆ ಎಂದರು.

ಇನ್ನು ನನ್ನ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರೋದು ನನಗೆ ಖುಷಿ ತಂದಿದೆ ಎಂದು ರಮೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಸ್ಪೀಕರ್ ಆದೇಶ ಎತ್ತಿ ಹಿಡಿದು ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ.

Key words: Former Speaker – Ramesh Kumar – Supreme Court – Judgment-disqualified MLA