Tuesday, September 15, 2026

BDA Apartments

ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ… BDA JK_Adv BDA Adv
Home Front Page ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ…

ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇನ್ನಿಲ್ಲ…

ನವದೆಹಲಿ,24,2019(www.justkannada.in):  ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ(66) ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಉಸಿರಾಟ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಅರುಣ್ ಜೇಟ್ಲಿ ಅವರನ್ನ ಅಗಸ್ಟ್ 9 ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅರುಣ್ ಜೇಟ್ಲಿ ನಿಧನರಾಗಿದ್ದಾರೆ.

ಅರುಣ್ ಜೇಟ್ಲಿ ಅವರು ಹಿಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಸರ್ಕಾರದ ಅವಧಿಯಲ್ಲಿ ರಾಜ್ಯ ದರ್ಜೆ ಸಚಿವರಾಗಿ ಕೆಲಸ ನಿರ್ವಹಿಸಿದರು. ನಂತರ 2002ರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ನಂತರ  ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.

Key words: Former Union Finance Minister -Arun Jaitley- is no more- New Delhi