Sunday, August 2, 2026

BDA Apartments

Home Front Page ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ನಿಧನ

ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ನಿಧನ

ಬೆಂಗಳೂರು,ಡಿಸೆಂಬರ್,17,2021(www.justkannada.in):  ಹಿರಿಯ ನಾಯಕ,ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ‌( 96) ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಹೆಗಡೆ ಅವರ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಅವರು, ದೇವೇಗೌಡರ ನೇತೃತ್ವದ ಜನತಾದಳ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1996 ರಲ್ಲಿ ಹೆಚ್.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಸಿದ್ಧರಾಮಯ್ಯ ಅವರು ಅಹಿಂದ ಚಳವಳಿಯನ್ನು ಸಂಘಟಿಸಲು ಮುಂದಾದ ಕಾಲದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು. ಜಾಲಪ್ಪ ಅವರ ನಿಧನಕ್ಕೆ ರಾಜ್ಯದೆಲ್ಲೆಡೆಯಿಂದ ಸಂತಾಪ ವ್ಯಕ್ತವಾಗಿದೆ.

key words: Former Union Minister -RL Jalappa -passed away