ಮಾಜಿ ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ಅವರ ಅಂತಿಮ ದರ್ಶನ ಪಡೆದ ಗಣ್ಯಾತಿಗಣ್ಯರು…

ನವದೆಹಲಿ,ಆ,7,2019(www.justkannada.in):  ಹೃದಯಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್ ಅವರ ಪಾರ್ಥೀವಶರೀರವನ್ನ ಅಂತಿಮ ದರ್ಶನಕ್ಕಿಡಲಾಗಿದ್ದು ಹಲವು ಗಣ್ಯಾತೀಗಣ್ಯರು  ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ಮಾಜಿ ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ನಿಧನರಾಗಿದ್ದು ಅವರ ಪಾರ್ಥೀವ ಶರೀರವನ್ನ  ದೆಹಲಿಯ ಜನಪತ್ ರಸ್ತೆಯಲ್ಲಿರುವ ದವನ್ ದೀಪ್ ಬಿಲ್ಡಿಂಗ್ ನಲ್ಲಿ  ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ 3 ಗಂಟೆ ವೇಳೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸುಷ್ಮಾ ಸ್ವರಾಜ್ ಅವರಿಗೆ ಗಣ್ಯಾತಿಗಣ್ಯರು ಅಂತಿಮ  ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ರಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿ ಹಲವು ಗಣ್ಯರು ಸುಷ್ಮಾ ಸ್ವರಾಜ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.

Key words: Former Union Minister -Sushma Swaraj –death- New Delhi -leaders