ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ

ಬೆಂಗಳೂರು,ನವೆಂಬರ್,02,2020(www.justkannada.in) : ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ.

jk-logo-justkannada-logo

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಗೆ ಖದೀಮರು ನುಗ್ಗಿ ತಮ್ಮ ಕೈಚಳಕ ತೋರಿಸಿದ್ದಾರೆ.

 

ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ

ಮನೆಯ ಬಾಗಿಲು ಮುರಿದು ಕಳ್ಳತನ ನಡೆದಿದ್ದು, ಅಪಾರ ಪ್ರಮಾಣದ ವಸ್ತು ಮತ್ತು ಹಣ ಕದ್ದಿರುವ ಶಂಕೆ ಇದೆ. ಸ್ಥಳಕ್ಕೆ ಬನಹಟ್ಟಿ ಸಿಪಿಐ ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.

Former-minister-veteran-actress-Umashree-steals-home

key words : Former-minister-veteran-actress-Umashree-steals-home