ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್…

ಮೈಸೂರು,ಜ,5,2020(www.justkannada.in): ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನ ನಗರದ ಕೆ.ಆರ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅವಿನಾಶ್, ಕಿರಣ್, ಗಿರೀಶ್, ರವಿ ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ಬೈಕ್ ಮತ್ತು ಮಾರಕಾಸ್ತ್ರಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಡಿಸೆಂಬರ್ 26 ರಂದು ಆದಿತ್ಯ ಎಂಬುವವರ ಮೇಲೆ ಹಲ್ಲೆ ಮಾಡಿದ್ದರು. ಹಳೆಯ ದ್ವೇಷದ ಹಿನ್ನೆಲೆ ಹಲ್ಲೆಗೈದಿದ್ದರು.

ಈ ಕುರಿತು ಕೆ.ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Key words: Four – accused –arrest- assaulting- man-mysore