Thursday, July 30, 2026

BDA Apartments

Home Crime ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ನಾಲ್ವರ ಬಂಧನ

ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ನಾಲ್ವರ ಬಂಧನ

ಬೆಂಗಳೂರು, ಜೂನ್​,6, 2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಬಂಧಿತರು.

ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ  ನಡೆಸಿದ್ದಾರೆ. ಇನ್ನು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ.vtu

Key words: RCB, Four, arrested, stampede , 11 dead