ಕೆಟ್ಟು ನಿಂತಿದ್ಧ  ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.

ವಿಜಯಪುರ,ಅಕ್ಟೋಬರ್,20,2021(www.justkannada.in): ಕೆಟ್ಟು ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಹೊನಗಾನಹಳ್ಳಿ ರಾ.ಹೆ 50ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ಧ ಮೂವರು ಹಾಗೂ ಲಾರಿ ಚಾಲಕ ಮೃತಪಟ್ಟಿದ್ದಾರೆ. ವಿಜಯಪುರದ ವ್ಯಕ್ತಿ, ಮಹಿಳೆ ಮಗು ಸೇರಿ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.nice road-Car overturn-driver-death 

ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Four –death-car -collides – truck-vijaypur