ಕಾವೇರಿ ನದಿಯಲ್ಲಿ ಮುಳುಗಿ ಮೈಸೂರು ಮೂಲದ ನಾಲ್ವರು ಸಾವು.

ಮಂಡ್ಯ,ಮಾರ್ಚ್ 26,2024, (www.justkannada.in): ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು  ನೀರಿನಲ್ಲಿ ಮುಳುಗಿ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ನಡೆದಿದೆ.

ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.

ಕುಟುಂಬಸ್ಥರು, ಸ್ನೇಹಿತರು ಸೇರಿ ಒಂದೇ ಬಸ್‌ ನಲ್ಲಿ 40 ಜನ ಮೈಸೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಲು ತೆರಳಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ.  ಈ ವೇಳೆ ಆತನನ್ನು ರಕ್ಷಣೆ ಮಾಡಲು ಹೋದ ಮೂವರು ಸಹ ನೀರುಪಾಲಾಗಿದ್ದಾರೆ ಎನ್ನಲಾಗಿದೆ.

Key words: Four, death, Cauvery, river