ಶಿವಮೊಗ್ಗ, ಜನವರಿ,19,2026 (www.justkannada.in): ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನ ಭದ್ರಾ ನಾಲೆಯಲ್ಲಿ ಈ ಘಟನೆ ನಡೆದಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ನೀರುಪಾಲಾದವರು. ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು.
ಮಾರಿ ಹಬ್ಬ ಹಿನ್ನೆಲೆಯಲ್ಲಿ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದು, ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದಾರೆ. ಈ ಸಮಯದಲ್ಲಿ ಅವರನ್ನ ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Key words: Four members, death, slipping, canal







