ನಮ್ಮ ಜತೆ ನಾಲ್ವರು ಶಾಸಕರು ರಾಜೀನಾಮೆ ಕೊಡ್ತಾರೆ – ಮಾಜಿ ಸಚಿವ ರಮೇಶ್ ಜಾರಕಿಹೊಳಿ…

ಬೆಳಗಾವಿ,ಮೇ,,10,2019(www.justkannada.in):  ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆಅಸಮಾಧಾನಗೊಂಡು ಬಿಜೆಪಿಗೆ ಸೇರಲು ಸಿದ್ಧರಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದೀಗ ತಾವು ಒಂಟಿಯಲ್ಲ. ತಮ್ಮ ಜತೆ ನಾಲ್ವರು ಶಾಸಕರು ರಾಜೀನಾಮೆ ನೀಡ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಬೆಳಗಾವಿಯ ಹೋಟೆಲ್ ವೊಂದರಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಭೆಯಲ್ಲಿ ಮಾತನಾಡಿರುವ ಶಾಸಕ ರಮೇಶ್ ಜಾರಕಿಹೊಳಿ, ನಮ್ಮ ಜತೆ ನಾಲ್ವರು ಶಾಸಕರು ರಾಜೀನಾಮೆ ನೀಡ್ತಾರೆ. ಮೇ.23ಕ್ಕೆ ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನು ಬೈ ಎಲೆಕ್ಷನ್ ಗೆ  ಗೋಕಾಕ್ ನಿಂದ ಸ್ಪರ್ಧಿಸುತ್ತೇನೆ. ವಿಧಾನಸಭಾ ಚುನಾವಣೆಗೆ ಯಮಕನಮರಡಿ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತೇನೆ ಎಂದ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಯಾರಿಗೂ ಹೆದರಬೇಡಿ.  ಈಗಿನಿಂದಲೇ ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಟಗೊಳಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Key words: Four –MLAs- resign- with -us – Former Ministe-r Ramesh Jarakiholi