ವಾಟರ್ ಟ್ಯಾಂಕರ್ ಹರಿದು ನಾಲ್ಕು ವರ್ಷದ ಬಾಲಕ ಸಾವು.

ಬೆಂಗಳೂರು,ಜೂನ್,7,2023(www.justkannada.in): ವಾಟರ್ ಟ್ಯಾಂಕರ್ ಹರಿದು ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ  ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯದಲ್ಲಿ ನಡೆದಿದೆ.

ನಾಲ್ಕು ವರ್ಷದ ಭುವನ್ ಮೃತಪಟ್ಟ ಬಾಲಕ. ಭುವನ್ ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಈ ವೇಳೆ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಮೃತಪಟ್ಟದ್ದಾನೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.

ವಾಟರ್ ಟ್ರ್ಯಾಕ್ಟರ್​​ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Four-year-old -boy -dies -water tanker- collapses.