ಸೆಲ್ಫಿ ತೆಗೆದುಕೊಳ್ಳುವಾಗ ಫಾಲ್ಸ್ ಗೆ ಬಿದ್ದು ನಾಲ್ವರು ಯುವತಿಯರು ಸಾವು.

ಬೆಳಗಾವಿ,ನವೆಂಬರ್,26,2022(www.justkannada.in): ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಫಾಲ್ಸ್ ಗೆ ಬಿದ್ದು ನಾಲ್ವರು ಯುವತಿಯರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಿಂದ ಕಿತವಾಡ ಫಾಲ್ಸ್‌ ಬಳಿ ನಡೆದಿದೆ.

ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಮೃತಪಟ್ಟ ಯುವತಿಯರು. ಐವರ ಪೈಕಿ ಮತ್ತೋರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್​ಗೆ  ಬೆಳಗಾವಿಯಿಂದ 40 ಯುವತಿಯರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುತ್ತಿದ್ದರು. ಈ ವೇಳೆ ಆಯ ತಪ್ಪಿ ಫಾಲ್ಸ್ ಮೇಲಿಂದ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಈಕೆಯನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಬಳಿ ಮೃತ ಯುವತಿಯರ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Key words: Four young- women –died- falling – falls – selfie-kitawada