ಸ್ವಾಮೀಜಿ ಬಂಧನವಾಗಲಿ ಎಲ್ಲ ಸತ್ಯ ಹೊರಗೆ ಬರುತ್ತೆ- ಹೊಸಬಾಂಬ್ ಸಿಡಿಸಿದ ಚೈತ್ರ ಕುಂದಾಪುರ

ಬೆಂಗಳೂರು, ಸೆಪ್ಟೆಂಬರ್ 14,2023(www.justkannada.in): ಎಂಎಲ್ಎ  ಬಿಜೆಪಿ ಟಿಕೆಟ್ ಕೊಡಿಸುವುದಾಗಿ  ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ಚೈತ್ರ ಕುಂದಾಪುರ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳಿಗೆ  ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಹಿತಿ ಬಿಚ್ಚಿಟ್ಟಿದ್ದಾರೆ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ಚೈತ್ರ ಕುಂದಾಪುರ 7 ಕೋಟಿ ರೂ ವಂಚಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಗಗನ್ ಕಡೂರು, ಮೋಹನ್ ಕುಮಾರ್ ಅಲಿಯಾಸ್ ರಮೇಶ್​ ಮತ್ತು ಗ್ಯಾಂಗ್ ಜತೆ ಸೇರಿಕೊಂಡು ಉದ್ಯಮಿ ಬಳಿಯಿಂದ ಬರೋಬ್ಬರಿ 7  ಪಡೆದು ವಂಚಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣ ಸಂಬಂಧ ಚೈತ್ರ ಕುಂದಾಪುರರನ್ನ ಬಂಧಿಸಿದ್ಧ ಸಿಸಿಬಿ ಪೊಲೀಸರು ನಿನ್ನೆ ಕೋರ್ಟ್ ಗೆ ಹಾಜರುಪಡಿಸಿದ್ದರು. ನಂತರ ಕೋರ್ಟ್ ಚೈತ್ರಕುಂದಾಪುರರನ್ನ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.

Key words: Fraud – MLA – BJP- ticket-Chaitra Kundapur