ಬೆಂಗಳೂರು, ಜುಲೈ 11,2025 (www.justkannada.in): ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.
ಹೌದು, ರಾಜ್ಯಾದ್ಯಂತ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Key words: Free bus, government school, children