ಜಯಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಾಳೆ ಉಚಿತ ಕೋವಿಡ್-19 ಪರೀಕ್ಷೆ…

ಮೈಸೂರು,ಆ,15,2020(www.justkannada.in):   ನಾಳೆ  ಜಯಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್-19 ಆಂಟಿಜೆನ್ ರಾಪಿಡ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.free-covid-19-test-tomorrow-government-health-center-mysore-jaipur

74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಜಯಪುರದ ನಾಡ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ ಮಾತನಾಡಿದ ಉಪ ತಹಶೀಲ್ದಾರ್ ಕುಬೇರ ಕೆ ಎಸ್ ಅವರು, ನಾಳೆ ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ಕೋವಿಡ್-19 ರ ಆಂಟಿಜೆನ್ ರಾಪಿಡ್ ಟೆಸ್ಟ್ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದ್ದು ಜಯಪುರ ಹೋಬಳಿಯ ಸಾರ್ವಜನಿಕರು ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು.free-covid-19-test-tomorrow-government-health-center-mysore-jaipur

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಕಚೇರಿ ಸಿಬ್ಬಂದಿ ವರ್ಗ ಹಾಗೂ ಇತರರು ಹಾಜರಿದ್ದರು.

Key words: Free- covid-19- test -tomorrow -Government Health Center-mysore- Jaipur.