Monday, September 21, 2026

BDA Apartments

Home Front Page ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ 10 ಕೆ.ಜಿ ಅಕ್ಕಿ ಉಚಿತ ವಿತರಣೆ- ಮತ್ತೊಂದು ಮಹತ್ವದ ಘೋಷಣೆ ಮಾಡಿದ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ 10 ಕೆ.ಜಿ ಅಕ್ಕಿ ಉಚಿತ ವಿತರಣೆ- ಮತ್ತೊಂದು ಮಹತ್ವದ ಘೋಷಣೆ ಮಾಡಿದ ಡಿ.ಕೆ ಶಿವಕುಮಾರ್.

ಬೆಂಗಳೂರು,ಫೆಬ್ರವರಿ,24,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಚುರುಕುಗೊಳಿಸಿರುವ ಕಾಂಗ್ರೆಸ್ ಇದೀಗ ಮತ್ತೊಂದು ಉಚಿತ ಘೋಷಣೆಯನ್ನ ಮಾಡಿದೆ.

ಹೌದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಇದರಡಿ ಬಿಪಿಎಲ್ ಕಾರ್ಡುದಾರರಿಗೆ ಮನೆಯ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ 10 ಕೆ.ಜಿ ಅಕ್ಕಿ ಉಚಿತ ವಿತರಣೆ dks

ಕಾಂಗ್ರೆಸ್ ತನ್ನ ಪ್ರಣಾಳಿಕೆ ಭಾಗವಾಗಿ ಉಚಿತವಾಗಿ 10ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ತಿಳಿಸಿದೆ. ಬೆಲೆ ಏರಿಕೆಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಉಚಿತ ವಿತರಣೆ ಮಾಡುವುದಾಗಿ ಘೋಷಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್  ಗೃಹಿಣಿಯರಿಗೆ 2 ಸಾವಿರ ರೂ  ನೀಡುವುದಾಗಿ ಘೋಷಣೆ ಮಾಡಿದೆ.

Key words: Free -distribution – 10 kg rice – Congress -DK Shivakumar