ಬಾಡಿಗೆದಾರರಿಗೂ ಗೃಹಜ್ಯೋತಿ ಭಾಗ್ಯ ವಿಚಾರ: ಸ್ಪಷ್ಟನೆ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್.

ಬೆಂಗಳೂರು,ಜೂನ್,6,2023(www.justkannada.in): ಬಾಡಿಗೆದಾರರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸಿಗಲಿದೆಯಾ ಎಂಬುದಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಜೆ ಜಾರ್ಜ್, ಬಾಡಿಗೆದಾರರಿಗೂ ಖಂಡಿತ ಗೃಹಜ್ಯೋತಿ ಭಾಗ್ಯ ಸಿಗಲಿದೆ.  ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಬಂಧಿಸಿದ ದಾಖಲೆ ಇರಬೇಕು.  ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದಾರೆ ಎಂಬ ದಾಖಲೆ ತೋರಿಸಬೇಕು ವಿದ್ಯುತ್ ಬಿಲ್ ಬಾಡಿಗೆ ಮನೆ ಕರಾರು ಪತ್ರ ಇರಬೇಕು.ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು ಎಂದು ಹೇಳಿದರು.

ಒಂದು ವೇಳೆ ತಪ್ಪು ಮಾಹಿತಿ ನೀಡಿದರೇ  ಈ ಯೋಜನೆ ಅನ್ವಯವಾಗುವುದಿಲ್ಲ. ಬಾಡಿಗೆದಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

Key words: free-electricity – Energy Minister- KJ George