ಬಡವರು, ಕೂಲಿಕಾರ್ಮಿಕರಿಗೆ ಉಚಿತ ಉಪಹಾರ ವ್ಯವಸ್ಥೆ: ಲಾಕ್ ಡೌನ್ ಮುಂದುವರಿಕೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಏನಂದ್ರು…

ಬೆಂಗಳೂರು,ಮೇ,15,2021(www.justkannada.in):  ಲಾಕ್ ಡೌನ್ 2ನೇ ಅಲೆ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿದ್ದು ಈ ವೇಳೆಯಲ್ಲಿ ಬಡವರು ಕೂಲಿ ಕಾರ್ಮಿಕರಿಗೆ ಉಚಿತ ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.jk

ಬೆಂಗಳೂರಿನಲ್ಲಿ ಇಂದು ಮಾತನಾಡಿದ  ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ  ಬಡವರಿಗಾಗಿ ಕೂಲಿ ಕಾರ್ಮಿಕರಿಗಾಗಿ  5 ಲಕ್ಷ ಉಚಿತ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಇಸ್ಕಾನ್ ವತಿಯಿಂದ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಪಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಲಾಕ್ ಡೌನ್ ಮುಂದುವರೆಸುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಸಿಎಂ ಬಿಎಸ್ ಯಡಿಯೂರಪ್ಪ ಟಾಸ್ಕ್ ಫೋರ್ಸ್ ಜತೆ ಚರ್ಚಿಸಲಿದ್ದಾರೆ. ಸಿಎಂ ಅಂಕಿ ಅಂಶಗಳನ್ನ ಪಡೆದು ಅಂಕಿ ಅಂಶಗಳ ಮೇಲೆ ಆಧರಿಸಿ ಲಾಕ್ ಡೌನ್ ಮುಂದುವರೆಸುವ ಕುರಿತು ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು.

Key words: Free -food – poor -Home Minister -Basavaraja Bommai – lockdown