ಡಿ.20 ರಂದು ಮೈಸೂರಿನಲ್ಲಿ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಮೈಸೂರು,ಡಿಸೆಂಬರ್,20,2023(www.justkannada.in): ಡಿಸೆಂಬರ್ 20 ರಂದು ಪೌರಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಸಮಾಜ ಸೇವಕರು, ಮತ್ತು ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರುತ್ ಗೌಡ ಹೇಳಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ. ಶುಶ್ರುತ್ ಗೌಡ, ನಮ್ಮ ಮೈಸೂರು ನಗರವನ್ನು ಸ್ವಚ್ಛವಾಗಿಡಲು ಪ್ರತಿನಿತ್ಯ ಮಳೆ, ಗಾಳಿ, ಚಳಿ ಎನ್ನದೇ ಕೆಲಸ ಮಾಡುವ ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಗರದ ಸ್ವಚ್ಛತೆಗಾಗಿ ಕೆಲಸ ಮಾಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಿ.ಆರ್. ಟ್ರಸ್ಟ್ ವತಿಯಿಂದ THAR (Te Health Advisory For Rural Zone) ಪ್ರೊಜೆಕ್ಟ್ ಅಡಿ ನಗರದ ಟೌನ್ ಹಾಲ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು 2023 ಡಿಸೆಂಬರ್ 20ರಂದು ಹಮ್ಮಿಕೊಳ್ಳಲಾಗಿದೆ. ಈವರೆಗೆ ನಮ್ಮ ಸಂಸ್ಥೆಯ ವತಿಯಿಂದ 50ಕ್ಕೂ ಹೆಚ್ಚು ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿದ್ದು, 10,000ಕ್ಕೂ ಹೆಚ್ಚು ಜನರರನ್ನು ತಪಾಸಣೆ ಮಾಡಲಾಗಿದೆ ಎಂದರು.

ಪೌರಕಾರ್ಮಿಕರ ದಿನಾಚರಣೆಯಂದು ಪೌರಕಾರ್ಮಿಕರಿಗಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುವುದಾಗಿ ಭರವಸೆ ನೀಡಿದ್ದೇವು. ನಾವು ಕೊಟ್ಟ ಮಾತಿನಂತೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ.  ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 2500ಕ್ಕೂ ಹೆಚ್ಚು ಪೌರಕಾರ್ಮಿಕರು ನಮ್ಮ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದಕೊಳ್ಳಬೇಕು ಎಂದು ಡಾ. ಶುಶ್ರುತ್ ಗೌಡ ಮನವಿ ಮಾಡಿದರು.

Key words: Free- health checkup -camp – civil -servants – Mysore -December 20.