Tuesday, September 8, 2026

BDA Apartments

Home Front Page ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಇನ್ಸುಲಿನ್: ರಾಜ್ಯ ಸರಕಾರದ ಮಹತ್ವದ ಕಾರ್ಯಕ್ರಮ

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಇನ್ಸುಲಿನ್: ರಾಜ್ಯ ಸರಕಾರದ ಮಹತ್ವದ ಕಾರ್ಯಕ್ರಮ

ಸಾಂದರ್ಭಿಕ ಚಿತ್ರ

ಬೆಂಗಳೂರು, ನವೆಂಬರ್ 19, 2023 (www.justkannada.in): ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಸರಕಾರ ಕ್ರಮ ಕೈಗೊಂಡಿದೆ.

ಹೌದು, ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಜನಪರ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 5000 ಮಕ್ಕಳಿಗೆ ಇದರ ಪ್ರಯೋಜನ ಲಭಿಸಲಿದೆ.

ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಮಹತ್ತರವಾದ ಹೆಜ್ಜೆ ಇಟ್ಟಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಸಮಸ್ಯೆ ಕಾಡುವುದನ್ನು ತಪ್ಪಿಸಲು ಸರಕಾರ ಈ ಯೋಜನೆ ಜಾರಿಗೆ ತರುತ್ತಿದೆ.