ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಒತ್ತಾಯ

ಮೈಸೂರು, ಜನವರಿ 12, 2019 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ವೇಳೆ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಪ್ರಕರಣ

ವಿವಾದಿತ ಪೋಸ್ಟರ್ ಹಿಡಿದಿದ್ದ ಯುವತಿ ಈಗಾಗಲೇ ಪೊಲೀಸರ ಬಳಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ದುರುದ್ದೇಶದಿಂದ ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಮಾಡಿಲ್ಲ ಎಂದು ಆ ಯುವತಿ ಹೇಳಿದ್ದಾರೆ.

ಹಾಗಾಗಿ ಪ್ರಕರಣದ ಸಂಬಂಧ ಪ್ರತಿಭಟನೆಗೆ ಕರೆ ನೀಡಿದ್ದ ಆಯೋಜಕರು ಮತ್ತು ವಿದ್ಯಾರ್ಥಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ. ವಿವಾದಿತ ಪೋಸ್ಟರ್ ಪ್ರದರ್ಶಿಸಿದ್ದ ಯುವತಿಯೇ ಸ್ಪಷ್ಟನೆ ನೀಡಿರುವುದರಿಂದ
ವಿದ್ಯಾರ್ಥಿ ಮುಖಂಡರ ವಿರುದ್ದ ದಾಖಲಿಸಿರುವ ದೇಶ ದ್ರೋಹದ ಪ್ರಕರಣವನ್ನು ಹಿಂಪಡೆಯಬೇಕು.

ಇಲ್ಲದಿದ್ದರೆ ವಿದ್ಯಾರ್ಥಿಗಳ ಜೊತೆಗೂಡಿ ರಾಜ್ಯಾದ್ಯಂತ ತೀವ್ರತರ ಹೋರಾಟ ನಡೆಸಲಾಗುವುದು. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಮೈಸೂರು ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಹೇಳಿಕೆ.