ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು ಮಾತನಾಡುತ್ತಿರುವರಿಗೆ ನೈತಿಕತೆ ಇದೆಯೇ? : ಸಚಿವ ಬಿ.ಶ್ರೀರಾಮುಲು

ಬೆಂಗಳೂರು,ಜನವರಿ,16,2021(www.justkannada.in) : ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳಲು, ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವ ಅವರಿಗೆ ನೈತಿಕತೆ ಇದೆಯೇ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಪ್ರಶ್ನಿಸಿದ್ದಾರೆ.jk-logo-justkannada-mysore

 ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದಲ್ಲಿ ಕುಳಿತ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಹುಶಃ ಅವರಿಗೆ ಮತಿಭ್ರಮಣೆ ಆಗಿರಬೇಕು ಎಂದು ಕಿಡಿಕಾರಿದ್ದಾರೆ.Free,Promotion,those,who,speak,morality?-,Minister,B.Sriramuluಎಚ್.ಡಿ.ಕುಮಾರಸ್ವಾಮಿ  ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ  ದೇವೇಗೌಡ ಅವರನ್ನು ಸೋಲಿಸಿದರು. ರಾಜಕೀಯ ಅಸ್ಥಿತ್ವಕ್ಕೆ ಮಾತನಾಡುತ್ತಿರುವವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

key words : Free-Promotion-those-who-speakmorality?-: Minister-B.Sriramulu