ರಾಜ್ಯದಲ್ಲಿ ಲಾಕ್ ಡೌನ್ ಚಿಂತನೆ ಇಲ್ಲ: ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ- ಸಚಿವ ಆರ್.ಅಶೋಕ್.

ಬೆಂಗಳೂರು,ಜನವರಿ,17,2022(www.justkannada.in):  ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಬಗ್ಗೆ ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊರೋನಾ ಸಂಬಂಧ ಇಂದು  ಸಿಎಂ ಬಸವರಾಜ ಬೊಮ್ಮಾಯಿ ಅವರು ವರ್ಚುವಲ್ ಮೂಲಕ ಸಚಿವರು ತಜ್ಞರು ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು. ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್, ವೀಕೆಂಡ್ ಕರ್ಫ್ಯೂ ವಿಸ್ತರಣೆ, ಟಫ್ ರೂಲ್ಸ್ ಬಗ್ಗೆ ಶುಕ್ರವಾರ ನಿರ್ಧಾರ ಮಾಡಲಾಗುತ್ತದೆ. ಜನವರಿ 25ರೊಳಗೆ ಕೊರೋನಾ ಕೇಸ್ ಪೀಕ್ ಗೆ ಹೋಗಬಹುದು. ರಾಜ್ಯದಲ್ಲಿ ಟೆಸ್ಟಿಂಗ್ ಹೆಚ್ಚಳ ಅವಶ್ಯಕತೆ ಇಲ್ಲ ಎಂದಿದ್ದಾರೆ ಎಂದರು.

ರಾಜ್ಯದಲ್ಲಿ ಲಾಕ್ ಡೌನ್ ನಿರ್ಧಾರ ಇಲ್ಲ. ರಾಜ್ಯದಲ್ಲಿ ಲಾಕ್ ಡೌನ್ ಮಮಾಡುವ ಯಾವುದೇ ಚಿಂತನೆ ಇಲ್ಲ. ಶಾಲೆಗಳ ವಿಚಾರ ಈಗಿರುವಂತೆ ಮುಂದುವರೆಯಲಿದೆ. ಶುಕ್ರವಾರ ಸಭೆ ಬಳಿಕ ಶಾಲೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

Key words: Friday- decision – Weekend Curfew- Minister- R. Ashok