ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

Promotion

 

ಬೆಂಗಳೂರು,ನವೆಂಬರ್,2,2021(www.justkannada.in):  ಬಾರಿ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು,  ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪಚುನಾವಣಾ ಫಲಿತಾಂಶ  ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಇನ್ನೆರಡು ಗಂಟೆಗಳಲ್ಲಿ ನಿಚ್ಚಳ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದರು.

ಸಿಂದಗಿ ಕ್ಷೇತ್ರದಲ್ಲಿ 8 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, 8 ಸುತ್ತಿನ ಮತ ಎಣಿಕೆಯಲ್ಲಿಯೂ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಹಾನಗಲ್ ನಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words:  BJP- will -win – two constituencies-  CM -Basavaraja Bommai- Confidence.