ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ‘ಕಿಂಗ್’ ಕೊಯ್ಲಿ ನಂ. 1

Promotion

ದುಬೈ, ಆಗಸ್ಟ್20, 2019 (www.justkannada.in): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದಾರೆ.

ಐಸಿಸಿ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

ವಿರಾಟ್ ಕೊಹ್ಲಿ ಅವರ ಖಾತೆಯಲ್ಲಿ ಈಗ 922 ಪಾಯಿಂಟ್‌ಗಳಿವೆ. ಸ್ಮಿತ್‌ ಬಗಲಲ್ಲಿ 913 ಪಾಯಿಂಟ್‌ ಗಳಿವೆ. ಅವರು ಆಯಷಸ್ ಸರಣಿಯ ಮೊದಲ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ್ದರು. ಎರಡನೇ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 92 ರನ್ ಕಲೆ ಹಾಕಿದ್ದರು.